ಶಿವಮೊಗ್ಗ : ಪಠ್ಯ ಪುಸ್ತಕ ಪರಿಷ್ಕರಣೆ, ರಾಷ್ಟ್ರಕವಿ ಕುವೆಂಪು ಸೇರಿದಂತೆ ಹಲವು ಸಾಹಿತಿಗಳ ನಿಂದನೆಯನ್ನು ಖಂಡಿಸಿ ಸಾಹಿತಿಗಳು, ಲೇಖಕರು, ಪ್ರಗತಿಪರ ಸಂಘಟನೆಗಳ ಮುಖಂಡರು ಜೂನ್ ೩ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಶುಕ್ರವಾರ ಬೆಳಗ್ಗೆ 10.30ಕ್ಕೆ ಶಿವಪ್ಪನಾಯಕ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಪ್ರಗತಿಪರ ಚಿಂತಕ ಪ್ರೊ.ರಾಜೇಂದ್ರ ಚನ್ನಿ, ರೈತಸಂಘದ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ್ ತಮ್ಮ ಆಕ್ರೊಶವನ್ನು ಹೊರ ಹಾಕಿದರು. ಇದೆ ವೇಳೆ ರೈತಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹೆಚ್.ಆರ್.ಬಸವರಾಜಪ್ಪಗೆ ಅಭಿನಂದನೆ ಸಲ್ಲಿಸಿದರು.