ಬಿಜೆಪಿಗೆ ಹಿಂದುಗಳ ಕಾಳಜಿಯಿಲ್ಲ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಚೆನ್ನಬಸಪ್ಪ ಆಡಿರುವ ಮಾತುಗಳನ್ನ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಖಂಡಿಸಿದ್ದಾರೆ.

ಈ ಕುರಿತಾಗಿ ಕನ್ನಡ ಮೀಡಿಯಂ ಸುದ್ದಿ ವಾಹಿನಿ ಜೊತೆ ಮಾತನಾಡಿದ ಅವರು, ನಮ್ಮ ಕಾಂಗ್ರೆಸ್ ಪಕ್ಷ ಸರ್ವಧರ್ಮದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ. ದೇಶದ ಬೆಳವಣಿಗೆಯಲ್ಲಿ ನಮ್ಮ ಪಕ್ಷದ ಪರಿಶ್ರಮ ಸಾಕಷ್ಟಿದೆ. ಬಿಜೆಪಿಯವರು ಹಿಂದುತ್ವದ ಹೆಸರಿನಲ್ಲಿ ಚುನಾವಣೆ ಮಾಡ್ತಾರೆ. ಆದ್ರೆ ಚುನಾವಣೆಯಲ್ಲಿ ಗೆದ್ದ ನಂತರ ಹಿಂದುಗಳ ಕುರಿತು ಕಾಳಜಿ ಇರುವುದಿಲ್ಲ ಎಂದು ಆರೋಪಿಸಿದ್ದಾರೆ.