ಶಿವಮೊಗ್ಗ : ಮತಾಂತರ ನಿಷೇಧ ಕಾಯ್ದೆ ಹಿಂಪಡೆಯಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದೆ.
ಈ ಕುರಿತಾಗಿ ಮಾತನಾಡಿದ ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಜೀಬ್, ಮತಾಂತರ ನಿಷೇಧ ಕಾನೂನನ್ನು ಹಿಂಪಡೆಯಬೇಕೆಂದು ಎಸ್‌ಡಿಪಿಐ ವತಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗಿದೆ. ಭಾರತದ ಸಂವಿಧಾನದಲ್ಲಿ ಭಾರತದ ಪ್ರಜೆಯು ತನಗಿಷ್ಟವಾದ ಧರ್ಮವನ್ನ ಅನುಸರಿಸುವ ಹಕ್ಕು ನೀಡಿದೆ. ಆದ್ರೆ ಕೋಮುವಾದಿ ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ಇಂತಹ ಕಾನೂನುಗಳನ್ನ ಜಾರಿಗೆ ತಂದಿದೆ ಎಂದು ಆರೋಪಿಸಿದರು.