ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು: ಎನ್‌ಎಸ್‌ಯುಐ 

ಶಿವಮೊಗ್ಗ : ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಆಗ್ರಹಿಸಿ ಎನ್‌ಎಸ್‌ಯುಐ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿತು. ಬಿಜೆಪಿ ನಾಯಕರ ಪ್ರಚೋದನಕಾರಿ ಹೇಳಿಕೆಯಿಂದಾಗಿ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಾರಿಸುವ ಜಾಗದಲ್ಲಿ ಕೇಸರಿ ಧ್ವಜ ಹಾರಿಸಿದ್ದಾರೆ.

ಶಾಂತಿ ಕಾಪಾಡಬೇಕಿದ್ದ ಸಚಿವರು ಕೇಸರಿ ಧ್ವಜವನ್ನ ಹಾರಿಸಿದವರನ್ನ ಸರ್ಮಥಿಸಿಕೊಂಡಿದ್ದಾರೆ. ಅಲ್ಲದೆ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಅಲ್ಲದೆ ಈ ಕುರಿತು ಸದನದಲ್ಲಿ ಚರ್ಚೆ ನಡೆದಾಗ ಈಶ್ವರಪ್ಪ ಹೇಳಿಕೆಯನ್ನ ಸಮರ್ಥಿಸಿಕೊಳ್ಳುವ ಮೂಲಕ ಸ್ಪೀಕರ್ ತಮ್ಮ ಸ್ಥಾನವನ್ನ ದುರಪಯೋಗಪಡಿಸಿಕೊಂಡಿದ್ದಾರೆ. ಹೀಗಾಗಿ ಕೂಡಲೇ ವಿಶ್ವೇಶರ ಹೆಗಡೆ ಕಾಗೇರಿ ಅವರನ್ನ  ಸ್ಪೀಕರ್ ಸ್ಥಾನದಿಂದ ಹಾಗೂ ಈಶ್ವರಪ್ಪ ಅವರನ್ನ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಹಾಗೂ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.