ನಿಮ್ಮ ಮಾತಿಗೂ ಅಧಿಕಾರಿಗಳು ಬೆಲೆ ಕೊಡ್ತಾಯಿಲ್ಲ 

ಶಿವಮೊಗ್ಗ : ಇಲ್ಲಿನ ಹೊಸಮನೆ ಬಡಾವಣೆಯಲ್ಲಿ ಸರಿಯಾಗಿ ನೀರು ಸರಬರಾಜಾಗುತ್ತಿಲ್ಲ. ಅಧಿಕಾರಿಗಳು ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಇವರ ವರ್ತನೆಯಿಂದ ಜನಸಾಮಾನ್ಯರು ನಲುಗಿ ಹೋಗಿದ್ದಾರೆ. ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಿಕೊಡಿ ಎಂದು ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಹಾಗೂ ಕಾಂಗ್ರೆಸ್ ಯುವ ಮುಖಂಡ ರಂಗನಾಥ್, ಸಚಿವ ಕೆ.ಎಸ್.ಈಶ್ವರಪ್ಪಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಸಚಿವರ ಅಧ್ಯಕ್ಷತೆಯಲ್ಲಿ ನೀರಿಗಾಗಿ ಹಲವು ಸಭೆಗಳು ನಡೆದಿವೆ. ೨೦೧೯ರಿಂದಲೂ ನೀರಿನ ಸಮಸ್ಯೆ ಬಗ್ಗೆ ಚರ್ಚಿಸುತ್ತಿದ್ದೇವೆ. ಆದರೂ ಕೂಡ ಅಧಿಕಾರಿಗಳು ಮಾತ್ರ ಸರಿಯಾಗಿ ನೀರು ಸರಬರಾಜು ಮಾಡುತ್ತಿಲ್ಲ. ಅಧಿಕಾರಿಗಳು ನಿಮ್ಮ ಮಾತಿಗೂ ಬೆಲೆ ಕೊಡ್ತಾಯಿಲ್ಲ. ಇದರಿಂದಾಗಿ ಜನರು ನೀರಿಗೆ ಪರದಾಡುವಂತಾಗಿದೆ. ಆದ್ದರಿಂದ ಶೀಘ್ರವಾಗಿ ಈ ಸಮಸ್ಯೆಯನ್ನು ಬಗೆಹರಿಸಿ ಕೊಡಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.