ಶಿವಮೊಗ್ಗ : ಹೊಸದಾಗಿ ರಚಿಸಿಲಾಗುತ್ತಿರುವ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಗೆ ಎಮ್ಮೆಹಟ್ಟಿ ಗ್ರಾಮ ಪಂಚಾಯತಿಯನ್ನ ಸೇರಿಸಿಕೊಳ್ಳುವ ಜಿಲ್ಲಾಡಳಿತದ ನಿರ್ಧಾರವನ್ನ ಕೈಬಿಡಬೇಕೆಂದು ಆಗ್ರಹಿಸಿ ಎಮ್ಮೆಹಟ್ಟಿ ಗ್ರಾಮ ಪಂಚಾಯತಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಡಳಿತದ ನಿರ್ಣಯ ಏಕಪಕ್ಷೀಯವಾಗಿದೆ. ಯಾವುದೇ ಗ್ರಾಮ ಸಭೆಗಳನ್ನ ನಡೆಸದೆ ಈ ತೀರ್ಮಾನಕ್ಕೆ ಬರಲಾಗಿದೆ. ಇದರಿಂದಾಗಿ ಗ್ರಾಮಸ್ಥರಿಗೆ ಸಾಕಷ್ಟು ಅನಾನುಕೂಲವಾಗುತ್ತದೆ. ಈ ಸಂಬಂಧ ನಾವು ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದೇವೆ. ಈ ಮಧ್ಯೆ ಕಾನೂನು ಬಾಹಿರವಾಗಿ ವಾರ್ಡ್ ವಿಂಗಡಣೆಗೆ ಮುಂದಾಗಿದ್ದಾರೆ. ಹೀಗಾಗಿ ತಾವುಗಳು ಖುದ್ದು ವಿಚಾರಣೆ ಮಾಡಿ ಕಾನೂನು ರೀತಿಯಲ್ಲಿ ಸ್ಥಳದ ಮಾಹಿತಿಯನ್ನ ತೆಗೆದುಕೊಂಡು ಕಾರ್ಯಪ್ರವೃತ್ತರಾಗಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.