ಸರಣಿ ಬ್ಯಾರೇಜ್ ಹಾಗೂ ಕೆರೆಗಳ ಅಭಿವೃದ್ಧಿಯಾಗಬೇಕಿದೆ 

ಬೆಂಗಳೂರು : ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಏಷ್ಯಾದಲ್ಲಿಯೇ ಅತಿ ಹೆಚ್ಚು ಕೆರೆಗಳಿವೆ. ಅತಿವೃಷ್ಟಿಯಿಂದಾಗಿ ಹಲವು ಕೆರೆಗಳಿಗೆ ಹಾನಿಯಾಗಿದೆ. ಆದ್ದರಿಂದ ಇವುಗಳನ್ನು ಹಾಗೂ ಸರಣಿ ಬ್ಯಾರೇಜ್‌ಗಳನ್ನು ಶೀಘ್ರವೇ ಅಭಿವೃದ್ಧಿ ಪಡಿಸಬೇಕೆಂದು ಶಾಸಕ ಕುಮಾರ್ ಬಂಗಾರಪ್ಪ ಸದನದಲ್ಲಿ ಆಗ್ರಹಿಸದ್ದಾರೆ.

ಈ ವೇಳೆ ಮಾತನಾಡಿದ ಅವರು, ಈ ಕೆಲಸಗಳು ಶೀಘ್ರವಾಗಿ ಆಗಬೇಕಿದೆ. ಸಣ್ಣ ನೀರಾವರಿ ಇಲಾಖೆಯಿಂದ ಇದಕ್ಕೆ ಅನುದಾನ ಬಿಡುಗಡೆ ಮಾಡಲು ಸಾಧ್ಯವಾಗದೇ ಇದ್ದರೆ. ಬೇರೆ ಮೂಲಗಳಿಂದಾದರು ಹಣ ಒದಗಿಸಬೇಕೆಂದು ಆಗ್ರಹಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಮಾಧುಸ್ವಾಮಿ, ನಮಗೂ ಈ ಕಾರ್ಯಕ್ರಮಗಳನ್ನು ಮಾಡಬೇಕೆಂದು ಆಸೆಯಿದೆ. ಹೀಗಾಗಿ ಈ ಬಗ್ಗೆ ಚರ್ಚೆ ನಡಿಸಿ ಒಂದು ತೀರ್ಮಾಕ್ಕೆ ಬರುತ್ತೇವೆ ಎಂದರು. ಇಷ್ಟಕ್ಕೆ ಸುಮ್ಮನಾಗದ ಶಾಸಕ ಕುಮಾರ್ ಬಂಗಾರಪ್ಪ ಮುಖ್ಯಮಂತ್ರಿಗಳೆ ಇದಕ್ಕೆ ಉತ್ತರ ನೀಡಬೇಕೆಂದು ಒತ್ತಾಯಿಸಿದರು.