ಹೊನ್ನಾಳಿ : ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದಿಂದ ಮಾಡಿರುವ ೪೦ ಪರ್ಸೆಂಟ್ ಆರೋಪಕ್ಕೆ ಕಾಂಗ್ರೆಸ್ ಮುಖಂಡರ ಮನೆಯಲ್ಲಿಯೇ ಡ್ರಾಪ್ಟ್ ರೆಡಿಯಾಗಿತ್ತು. ಆನಂತರವೇ ಪ್ರಧಾನಿ ನರೇಂದ್ರ ಮೋದಿ, ಹಾಗೂ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ.
ಕೆ.ಎಸ್.ಈಶ್ವರಪ್ಪ ಪರ ಮತ್ತೆ ಬ್ಯಾಟಿಂಗ್ ಮಾಡಿದ ಅವರು, ಈಶ್ವರಪ್ಪನವರು ಯಾವುದೇ ಅಪರಾಧ ಮಾಡಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪಾರದರ್ಶಕ ಆಡಳಿತ ನಡೆಸ್ತಾಯಿದೆ. ಕಾಂಗ್ರೆಸ್‌ನವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ನೈತಿಕತೆಯಿಲ್ಲ. ಈಶ್ವರಪ್ಪ ಅವರನ್ನು ಬಂಧಿಸಿ ಎಂದು ಹೇಳುವ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು. ಈಶ್ವರಪ್ಪ ಯಾಕೆ ರಾಜೀನಾಮೆ ನೀಡಬೇಕು? ಅವರು ಏನ್ ತಪ್ಪು ಮಾಡಿದ್ದಾರೆ ಮಾಡಿದ್ದಾರೆ? ಜಾರ್ಜ್ ವಿರುದ್ಧ ವಿಡಿಯೋ ಸಾಕ್ಷಿ ಕೂಡಯಿತ್ತು. ಅವರನ್ನು ನೀವು ಬಂಧಿಸಿದ್ದಿರಾ? ಎಂದು ಪ್ರಶ್ನಿಸಿದ್ದಾರೆ.