ಶಿವಮೊಗ್ಗ : ರಾಜ್ಯದಲ್ಲಿ ಸರ್ಕಾರವು ತನ್ನ ವೈಫಲ್ಯಗಳನ್ನು ಜನರ ಮನಸ್ಸಿನಿಂದ ದೂರಮಾಡಲು ಕೆಲ ಘಟನೆಗಳಿಗೆ ಸರ್ಕಾರವೇ ಪರೋಕ್ಷ ಬೆಂಬಲ ನೀಡುತ್ತಿದೆ. ರಾಜ್ಯದಲ್ಲಿ ಉಂಟಾಗಿರುವ ಎಲ್ಲಾ ಗೊಂದಲಗಳಿಗೆ ಸರ್ಕಾರದ ಮೌನವೇ ಕಾರಣ. ಸಾಮಾಜದಲ್ಲಿರುವ ಎಲ್ಲಾ ಸಮುದಾಯದ 5 ಪರ್ಸೆಂಟ್ ಕೋಮುವಾದಿಗಳು ಸೃಷ್ಟಿಸುವ ವಿವಾದವನ್ನು ಸರ್ಕಾರ ಮೌನವಾಗಿ ಆನಂದಿಸುತ್ತಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಶಬ್ದ ಮಾಲಿನ್ಯದ ವಿಚಾರವಾಗಿ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚಿಸಿ ಸಂಪೂರ್ಣವಾಗಿ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕು. ಸರ್ಕಾರದ ಆ ತೀರ್ಮಾನವು ಕಾನೂನು ಹಾಗೂ ಸಂವಿಧಾನ ಬದ್ಧವಾಗಿ ಇರಬೇಕು ಎಂದು ಆಗ್ರಹಿಸಿದ್ದಾರೆ.