ಗೃಹಸಚಿವರು ಪ್ರಾಮಾಣಿಕವಾಗಿ ನಡೆದುಕೊಂಡಿದ್ದಾರೆ 

ಶಿವಮೊಗ್ಗ : ಬೆಂಗಳೂರಿನಲ್ಲಿ ನಡೆದ ಚಂದ್ರಶೇಖರ್ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಆರಗ ಜ್ಞಾನೇಂದ್ರ ತಮಗೆ ಸಿಕ್ಕ ಮಾಹಿತಿ ಆಧಾರದ ಮೇಲೆ ಹೇಳಿಕೆ ನೀಡಿದ್ದಾರೆ. ಅವರು ಪ್ರಾಮಾಣಿಕರಾಗಿ ನಡೆದುಕೊಂಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಸಹ ಇತ್ತೀಚೆಗೆ ಬೊಮ್ಮಾಯಿ ಅವರ ಗಂಡಸ್ತನದ ಬಗ್ಗೆ ಮಾತನಾಡಿದ್ದರು. ನಂತರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡರು. ಹಾಗೆಯೇ ಆರಗ ಜ್ಞಾನೇಂದ್ರ ಸಹ ತಮ್ಮ ಮೊದಲಿನ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಗೃಹ ಸಚಿವರ ಹೇಳಿಕೆಯನ್ನೇ ಹೈಲೆಟ್ ಮಾಡುವ ಬದಲು ಈ ರೀತಿ ಗೂಂಡಾಗಿರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದಿದ್ದರೆ ನಾನು ಮೆಚ್ಚುತ್ತಿದ್ದೆ ಎಂದಿದ್ದಾರೆ.