ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವ ಜುಲೈ ೮ ರಂದು ನಡೆಯಲಿದೆ. ಬೆಂಗಳೂರಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.
ಆದಿಚುಂಚನಗಿರಿ ಮಠದ ಡಾ.ಶ್ರೀ ನಿರ್ಮಲಾನಂದ ಸ್ವಾಮೀಜಿ ಹಾಗೂ ಸಿದ್ದಗಂಗ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ವಹಿಸಿಕೊಳ್ಳಲಿದ್ದಾರೆ. ಸಚಿವ ವಿ.ಸೋಮಣ್ಣ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.
ಇದೇ ವೇಳೆ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ೨೦ ಸಾವಿರಕ್ಕು ಹೆಚ್ಚು ನಿವೃತ್ತ ನೌಕರರು ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಸಿಎಂಗೆ ಮನವಿ ಪತ್ರ ಸಲ್ಲಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದಿಂದ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಲಾಗಿದೆ.