ಶಿವಮೊಗ್ಗ : ಲಿಂಗಾಯತ ಪಂಚಮಸಾಲಿ ಹಾಗೂ ಲಿಂಗಾಯತ ಮಲೇಗೌಡ ಮೀಸಲಾತಿಗೆ ಆಗ್ರಹಿಸಿ ಮುಖ್ಯಮಂತ್ರಿ ಗಮನ ಸೆಳೆಯಲು ಪ್ರತಿಜ್ಞಾ ಪಂಚಾಯತ್ ಅಭಿಯಾನ ಹಾಗೂ ಜಾಗೃತಿ ಸಭೆಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಪಂಚಮಸಾಲಿ ಸಾಮಾಜದ ಜಯಮೃತ್ಯುಂಜಯ ಸ್ವಾಮೀಜಿ ಮೀಸಲಾತಿ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ರು. ಈ ನಿಟ್ಟಿನಲ್ಲಿ ಅವರ ಗಮನ ಸೆಳೆಯಲು ಹಾಗೂ ಒತ್ತಡ ಹೇರಲು ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಗಸ್ಟ್ ೧೬ರಿಂದ ೨೪ನೇ ತಾರೀಕಿನ ತನಕ ಪ್ರತಿಜ್ಞಾ ಪಂಚಾಯತ್ ಅಭಿಯಾನ ಹಾಗೂ ಜಾಗೃತಿ ಸಭೆಗಳನ್ನು ಹಮ್ಮಿಕೊಳ್ಳಲಾಗಿದೆ. ಆಗಸ್ಟ್ ೨೪ರಂದು ಶಿವಪ್ಪನಾಯಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಬಳಿ ಹಕ್ಕೋತ್ತಾಯ ಮಾಡಲಾಗುವುದು ಎಂದು ತಿಳಿಸಿದ್ರು.