ಮನೆಗಳ್ಳನ ಬಂಧನ : ಆರೋಪಿಯಿಂದ ೫ ಲಕ್ಷ ೬೦ ಸಾವಿರ ನಗದು ವಶಕ್ಕೆ

ಭದ್ರಾವತಿ : ಜನವರಿ 13ರಂದು ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದರಲ್ಲಿ ಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಚೇತನ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮನೆಯವರು ಕೆಲಸಕ್ಕೆ ಹೋದಾಗ ಸಂದರ್ಭದಲ್ಲಿ ಮನೆಯ ಹಿಂಬಾಗಿಲಿನ ಬೀಗ ಒಡೆದು ಮನೆಯಲ್ಲಿದ್ದ 6ಲಕ್ಷ ನಗದು ಹಾಗೂ 5 ಲಕ್ಷ 66 ಸಾವಿರ ಮೌಲ್ಯದ ಬಂಗಾರದ ಆಭರಣವನ್ನು ಕಳ್ಳತನ ಮಾಡಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಪೊಲೀಸರು ಚೇತನ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 5 ಲಕ್ಷ 60  ಸಾವಿರ ನಗದು ಹಾಗೂ 6 ಲಕ್ಷ 43 ಸಾವಿರ ಮೌಲ್ಯದ 134.44 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.