ಶಿವಮೊಗ್ಗ : ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿದವರನ್ನ ಗಲ್ಲಿಗೇರಿಸಬೇಕೆಂದು ಜಿಲ್ಲಾ ಯುವ ಕುರುಬರ ಬಳಗ ಆಗ್ರಹಿಸಿದೆ. ಈ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಯುವ ಕಾಂಗ್ರೆಸ್ ಮುಖಂಡ ರಂಗನಾಥ್, ಸುವರ್ಣ ಸೌಧದಲ್ಲಿ ಅಧಿವೇಶನ ನಡೆಯುತ್ತಿರುವ ಈ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸಗೊಳಿಸಿದ್ದು ಅತ್ಯಂತ ಹೀನ ಹಾಗೂ ಕ್ರೂರ ಕೃತ್ಯವಾಗಿದೆ. ಹಾಗಾಗಿ ಈ ಕೃತ್ಯ ಎಸಗಿದವರನ್ನ ತಕ್ಷಣ ಬಂಧಿಸಬೇಕು. ಇಲ್ಲ ಅಂದ್ರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.