ಹೊನ್ನಾಳಿ : ರಾಜ್ಯದಲ್ಲಿ ತಲ್ಲಣ ಉಂಟುಮಾಡಿರುವ ಹಿಜಾಬ್ ವಿವಾದದ ಹಿಂದೆ ರಾಜಕೀಯ ಷಡ್ಯಂತ್ರ ಹಾಗೂ ಅಂತಾರಾಷ್ಟ್ರೀಯ ಭಯೋತ್ಪೋದಕ ಸಂಘಟನೆಗಳ ಕೈವಾಡವಿದೆ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಕುರಿತಾಗಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಸಮಾನತೆ ಇರಬೇಕೆಂದು ಈ ಹಿಂದೆ ಸಮವಸ್ತ್ರದ ಕುರಿತಾಗಿ ಕೋರ್ಟ್ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಕೂಡ ಸಮವಸ್ತ್ರ ಕಡ್ಡಾಯವೆಂದು ಆದೇಶ ಹೊರಡಿಸಿದೆ. ನಾವು ಯಾವುದೇ ಅಲ್ಪಸಂಖ್ಯಾತರ ವಿರೋಧಿಗಳಲ್ಲ ಎಂದು ಹೇಳಿದ್ದಾರೆ.