ಇದು ಆರು ಕೋಟಿ ಕನ್ನಡಿಗರಿಗೆ ಮಾಡಿದ ಅವಮಾನ

ಶಿವಮೊಗ್ಗ :  ಬೆಳಗಾವಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನ ವಿರೂಪಗೊಳಿಸಿರುವುದನ್ನ ಖಂಡಿಸಿ ದುರ್ಗಿಗುಡಿ ಕನ್ನಡ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿಗೊಳಿಸಿರುವುದು ಕರ್ನಾಟಕದ ಆರು ಕೋಟಿ ಕನ್ನಡಿಗರಿಗೆ ಮಾಡಿದ ಅವಮಾನವಾಗಿದೆ. ಹೀಗಾಗಿ ಪ್ರತಿಮೆ ವಿರೂಪಗೊಳಿಸಿರುವ ಎಲ್ಲಾ ಕಿಡಿಗೇಡಿಗಳನ್ನ ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗೆ ಪತ್ರ ಸಲ್ಲಿಸಿದರು.