ಬೆಂಗಳೂರು : ವಿಕೃತ ಮನಸ್ಸಿನ ಕಿಡಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ. ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ. ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ.
ಹೀಗಂತ ಟ್ವಿಟ್ ಮಾಡಿರೋದು ವಿಪಕ್ಷ ನಾಯಕ ಸಿದ್ದರಾಮಯ್ಯ. ಹಿಂದೂ ಧರ್ಮದ ದಲಿತರು ಮತ್ತು ಹಿಂದುಳಿದ ಜಾತಿಗಳು ಬಹುಸಂಖ್ಯೆಯಲ್ಲಿ ಇದಾರೆ. ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗೋದಿಲ್ವಾ..? ಎಂದು ಸರಕಾರಕ್ಕೆ ಸಿದ್ಧರಾಮಯ್ಯ ಖಾರವಾಗಿ ಪ್ರಶ್ನೆ ಮಾಡಿದ್ದಾರೆ.
ಬಸವಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತೇ..? ಅವಮಾನ ಮಾಡಲಾಯಿತೇ..? ಎಂದು ಸಿದ್ದರಾಮಯ್ಯ ಟ್ವಿಟ್ ಮೂಲಕ ಸರಕಾರವನ್ನು ಪ್ರಶ್ನಿಸಿದ್ದಾರೆ.