ಯುವ ಕಾಂಗ್ರೆಸ್ ಧ್ವಜಾರೋಹಣ ಮಾಡಿದ ಹೆಚ್.ಎಸ್. ಸುಂದರೇಶ್
ಶಿವಮೊಗ್ಗ : ಯುವ ಕಾಂಗ್ರೆಸ್ ೬೨ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಯುವ ಕಾಂಗ್ರೆಸ್‌ನ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿಕೊಟ್ರು. ಈ ವೇಳೆ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಗಿರೀಶ್, ಕರೋನ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಮಾಡಿದ್ದ ಕಾರ್ಯಕ್ಕೆ ವಿಶ್ವವೇ ಹೊಗಳಿದೆ. ಕಾಂಗ್ರಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಕೈ ಬಲಪಡಿಸುವುದೇ ನಮ್ಮ ಗುರಿ ಎಂದರು.
ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ ನಾಯಕರಿಗೆ ಗೌರವ ನಮನ
ಶಿವಮೊಗ್ಗ : ಕ್ವಿಟ್ ಇಂಡಿಯಾ ಚಳವಳಿ ನಡೆದು ೮೦ ವರ್ಷಗಳು ಕಳೆದಿವೆ. ಆಗಸ್ಟ್ ೮, ೧೯೪೦ ರಂದು ಗಾಂಧೀಜಿಯವರ ನೇತೃತ್ವದಲ್ಲಿ ಚಳುವಳಿ ಆರಂಭವಾಗಿತ್ತು. ಈ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದರೇಶ್, ಮಹಾತ್ಮ ಗಾಂಧಿಯವರು ೮೦ ವರ್ಷಗಳ ಹಿಂದೆ ಕ್ವಿಟ್ ಇಂಡಿಯಾ ಚಳುವಳಿ ಆರಂಭಿಸಿದ್ದರು. ಆ ಚಳುವಳಿಯಲ್ಲಿ ಭಾಗವಹಿಸಿದ ಮಹಾನ್ ನಾಯಕರಿಗೆ ಗೌರವಿಸಲು ಹಾಗೂ ಇದರ ಬಗ್ಗೆ ಜನರಿಗೆ ಮೆಲುಕು ಹಾಕುವ ಸಲುವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್‌ನ ಪ್ರಮುಖ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.