ಶಿವಮೊಗ್ಗ : ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದ ಯೂನಿಫಾರಂ, ಸೈಕಲ್, ಶೂ ಹಾಗೂ ಪಠ್ಯಪುಸ್ತಕಗಳನ್ನು ಶೀಘ್ರವಾಗಿ ನೀಡುವಂತೆ ಆಗ್ರಹಿಸಿ ಸಂಯುಕ್ತ ಜನತಾದಳದ ಕಾರ್ಯದರ್ಶಿ ಶಶಿಕುಮಾರ್ ಗೌಡ ಪ್ರತಿಭಟನೆ ನಡೆಸಿದರು.
ಕಳೆದ ಎರಡು ವರ್ಷಗಳಿಂದ ಕರೋನದಿಂದಾಗಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಬಲವಾದ ಪೆಟ್ಟು ಬಿದ್ದಿದೆ. ಶಾಲೆಗಳು ಆರಂಭವಾಗಿ ಹಲವು ದಿನಗಳಾದರು ಸರ್ಕಾರ ಉಚಿತವಾಗಿ ಪೂರೈಕೆ ಮಾಡಬೇಕಿದ್ದ ಸಾಮಾಗ್ರಿಗಳನ್ನ ಪೂರೈಕೆ ಮಾಡಿಲ್ಲ. ಈ ವಿಚಾರವಾಗಿ ಸರ್ಕಾರ ವಿಳಂಬ ನೀತಿಯನ್ನು ಅನುಸರಿಸ್ತಾಯಿದ್ದು, ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಸರ್ಕಾರ ಕೂಡಲೇ ಎಲ್ಲವನ್ನು ಪೂರೈಸಬೇಕು.
ಇಲ್ಲವಾದಲ್ಲಿ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹೋರಾ ಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿರು. ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.