ಶಿವಮೊಗ್ಗದಲ್ಲಿ ಅದ್ದೂರಿಯಾಗಿ ನಡೆದ ವರಮಹಾಲಕ್ಷ್ಮಿ ಹಬ್ಬ

ಶಿವಮೊಗ್ಗ : ನಾಡಿನೆಲ್ಲೆಡೆ ಶ್ರಾವಣ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ವರಮಹಾಲಕ್ಷ್ಮಿ ದೇವಿಗೆ ಸೀರೆ ಉಡಿಸಿ, ಕಲಶ ಇಟ್ಟು ವಸ್ತ್ರ, ಒಡವೆ, ಹಣಗಳನಿಟ್ಟು, ಫಲವಸ್ತುಗಳು, ಅರಶಿನ ಕುಂಕುಮ, ನೈವೇದ್ಯಕ್ಕೆ ಹಣ್ಣು, ತರಕಾರಿ, ಬಗೆಬಗೆಯ ತಿನಿಸುಗಳನ್ನು ತಯಾರಿಸಿ ಮಹಾಲಕ್ಷ್ಮಿ ದೇವಿಯ ಮುಂದಿಟ್ಟು ಪೂಜಿಸುತ್ತಾರೆ. ಮಹಿಳೆಯರೇ ಮಾಡುವ ಹಬ್ಬ ಇದಾಗಿರುವುದರಿಂದ ಮಹಿಳೆಯರು ನಸುಕಿನಲ್ಲಿಯೇ ಎದ್ದು ಮನೆಯ ಮುಂದೆ ಸಾರಿಸಿ ರಂಗೋಲಿ ಬಳಿದು ಸ್ನಾನ ಮಾಡಿ ಬಂದು ಹೊಸ ಉಡುಗೆ ತೊಟ್ಟು ದೇವಿಗೆ ಮುಂದೆ ಕುಳಿತು ಸಂಕಲ್ಪ ಮಾಡಿ ವ್ರತ ಕೈಗೊಳ್ಳುತ್ತಾರೆ. ನಂತರ ದೇವಿಗೆ ಬಗೆಬಗೆಯ ತಿನಿಸುಗಳನ್ನು ತಯಾರಿಸಿ ದೇವರ ಮುಂದಿಡುತ್ತಾರೆ. ಹಲವೆಡೆ ಸಾಯಂಕಾಲ ವರಮಹಾಲಕ್ಷ್ಮಿಗೆ ಪೂಜೆ ಮಾಡುತ್ತಾರೆ. ಸಾಯಂಕಾಲ ಹೊತ್ತು ಮುತ್ತೈದೆಯರನ್ನು ಅರಶಿನ ಕುಂಕುಮಕ್ಕೆ ಕರೆಯುವುದು ಬಹುತೇಕ ಕಡೆ ವಾಡಿಕೆಯಿದೆ.

ಕೆಎಸ್‌ಈ ಮನೆಯಲ್ಲಿ ಸಡಗರದ ವರಮಹಾಲಕ್ಷ್ಮಿ ಹಬ್ಬ

ಶಿವಮೊಗ್ಗ : ಎಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮನೆಯಲ್ಲಿ ಅತ್ಯಂತ ಸಡಗರದಿಂದ ಹಬ್ಬವನ್ನು ಆಚರಿಸಿದ್ದಾರೆ. ಮನೆಯಲ್ಲಿ ವರಮಹಲಕ್ಷ್ಮಿ ದೇವಿಯನ್ನ ಕೂರಿಸಿ ಅಲಂಕರಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.