ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಕೊಲೆ

ಹುಬ್ಬಳಿ : ಸರಳವಾಸ್ತು ಸಂಸ್ಥಾಪಕ ಹಾಗೂ ರಾಜ್ಯದ ಪ್ರಸಿದ್ಧ ವಾಸ್ತು ತಜ್ಞ ಚಂದ್ರಶೇಖರ ಗುರೂಜಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಉಣಕಲ್ ಬಳಿಯ ಖಾಸಗಿ ಹೊಟೇಲ್‌ನಲ್ಲಿ ಕಗ್ಗೊಲೆ ಮಾಡಲಾಗಿದ್ದು, ಹತ್ಯೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಹಾಡಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದು, ಖಾಸಗಿ ಹೋಟೆಲ್‌ನ ರಿಸಪ್ಷನ್‌ನಲ್ಲಿ ದುಷ್ಕರ್ಮಿಗಳು ಹತ್ಯೆಮಾಡಿದ್ದಾರೆ. 

ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಕೊಲೆ ಮಾಡಿರುವ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ನಾನಾ ಕಾರಣಗಳು ಕೇಳಿ ಬರ್‍ತಾಯಿದ್ದು, ಮಹಂತೇಶ್ ಮತ್ತು ಆತನ ಪತ್ನಿ ವನಜಾಕ್ಷಿಯನ್ನು ಗೋಕುಲ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹಲವಾರು ವರ್ಷಗಳಿಂದ ಜೊತೆಯಲ್ಲಿದ್ದವರೇ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. 

ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಮೊದಲು ಕಾಲಿಗೆ ನಮಸ್ಕರಿಸಿ ಬಳಿಕ ಚಾಕುವಿನಿಂದ ಅನೇಕ ಬಾರಿ ಇರಿದಿದ್ದಾರೆ. ಹೊಟ್ಟೆ ಹಾಗೂ ಎದೆಯ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾರೆ. ಗುರೂಜಿಯವರು ರಕ್ತ ಮಡುವಿನಲ್ಲಿ ಬೀಳುತ್ತಿದ್ದಂತೆಯೇ ದುಷ್ಕರ್ಮಿಗಳು ಘಟನಾ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸಿನಿಮಾ ಸ್ಟೈಲ್‌ನಲ್ಲಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆದ್ರೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.