ಶಿವಮೊಗ್ಗ: ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆ ಇವತ್ತು ದೇವಾಲಯಗಳನ್ನು ಒಡೆಯುವಂತಹ ಕೆಲಸ ನಡೆಯುತ್ತಿದೆ. ಇದಕ್ಕೆ ಅವಕಾಶ ಕೊಡಲ್ಲ ಅಂತ ಮುಖ್ಯಮಂತ್ರಿಗಳು ಕೂಡ ಅಧಿವೇಶನದಲ್ಲಿ ಉತ್ತರ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಬಿಜೆಪಿ ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಧಿಕಾರಿಗಳು ಕೂಡ ಈ ಬಗ್ಗೆ ಯೋಚನೆ ಮಾಡಬೇಕು. ಅಲ್ಲಿನ ಜನರ ಭಾವನೆ ಮತ್ತು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಈ ವಿಷಯ ಬರುವಂತಹ ದಿನಗಳಲ್ಲಿ ಸರಿಹೋಗುವ ವಿಶ್ವಾಸವಿದೆ ಎಂದರು. ಇನ್ನು ಸಂಪುಟದಲ್ಲಿ ತಮಗೆ ಸ್ಥಾನ ಕೊಡುವ ಬಗ್ಗೆ ಪ್ರತಿಕ್ರಿಯಿಸಿ, ನಾನು ಭಾರತೀಯ ಜನತಾ ಪಾರ್ಟಿಯ ರಾಜ್ಯ ಉಪಾಧ್ಯಕ್ಷನಾಗಿ ನನ್ನ ಕೆಲಸ ನಾನು ಮಾಡುತ್ತಿದ್ದೇನೆ. ಪಕ್ಷದ ಮುಖಂಡರು ಯಾರಿಗೆ ಯಾವ ಸ್ಥಾನವನ್ನು ಯಾವ ಸಂದರ್ಭದಲ್ಲಿ ನೀಡಬೇಕು ಅಂತ ನಿರ್ಧಾರ ಮಾಡ್ತಾರೆ. ನಾನು ಯಾವುದೇ ಒಂದು ನಿರೀಕ್ಷೆ ಇಟ್ಕೊಂಡು ಆ ದಿಕ್ಕಿನಲ್ಲಿ ಕೆಲಸ ಮಾಡ್ತಾ ಇಲ್ಲ ಎಂದರು.