ಐಸಿಸಿ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ಕುಸಿತ ಕಂಡ ವಿರಾಟ್ ಕೊಹ್ಲಿ

2018 ರಲ್ಲಿ ವಿರಾಟ್ ಕೊಯ್ಲಿ ಅಗ್ರ ಸ್ಥಾನದಲ್ಲಿದ್ದರು ನಂತರದ ದಿನಗಳಲ್ಲಿ ಕೆಲವು ಪಂದ್ಯಗಳಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನಗಳು ಬಾರದ ಕಾರಣ 4 ನೇ ಸ್ಥಾನಕ್ಕೆ ಕುಸಿದಿದ್ದರು. ಇದೀಗ ಇಂಗ್ಲೆಂಡ್ ವಿರುದ್ದ ಕೂಡ ಉತ್ತಮ ಪ್ರದರ್ಶನ ನೀಡದ ಹಿನ್ನಲೆಯಲ್ಲಿ ಮತ್ತೆ ಒಂದು ಸ್ಥಾನ ಕುಸಿತ ಅನುಭವಿಸಿದ್ದಾರೆ.

ಮುಂಬೈ, ಆ. 12: ಭಾರತ ಮತ್ತು ಇಂಗ್ಲೆಂಡ್ ನಡುವಿನ ಪ್ರಥಮ ಟೆಸ್ಟ್ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಐಸಿಸಿ ನೂತನ ಟೆಸ್ಟ್ ರ್ಯಾಂಕಿಂಗ್ ಅನ್ನು ಬಿಡುಗಡೆಗೊಳಿಸಿದ್ದು ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಯ್ಲಿ 4ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಕುಸಿದ್ದಾರೆ. ಹಾಗೆ ಭಾರತ ತಂಡದ ವೇಗಿ ಜಸ್ಪ್ರೀತ್ ಬುಮ್ರಾ 9ನೇ ಸ್ಥಾನಕ್ಕೆ ಜಿಗಿದು ಅಗ್ರ ಹತ್ತರೊಳಗೆ ಸ್ಥಾನ ಪಡೆದುಕೊಂಡಿದ್ದಾರೆ.

ಕೊಹ್ಲಿ ಕುಸಿತ : 2018 ರಲ್ಲಿ ವಿರಾಟ್ ಕೊಯ್ಲಿ ಅಗ್ರ ಸ್ಥಾನದಲ್ಲಿದ್ದರು ನಂತರದ ದಿನಗಳಲ್ಲಿ ಕೆಲವು ಪಂದ್ಯಗಳಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನಗಳು ಬಾರದ ಕಾರಣ 4 ನೇ ಸ್ಥಾನಕ್ಕೆ ಕುಸಿದಿದ್ದರು. ಇದೀಗ ಇಂಗ್ಲೆಂಡ್ ವಿರುದ್ದ ಕೂಡ ಉತ್ತಮ ಪ್ರದರ್ಶನ ನೀಡದ ಹಿನ್ನಲೆಯಲ್ಲಿ ಮತ್ತೆ ಒಂದು ಸ್ಥಾನ ಕುಸಿತ ಅನುಭವಿಸಿದ್ದಾರೆ.