ನಮ್ಮ ಕ್ಷೇತ್ರದಲ್ಲಿ ಉತ್ತಮ ಗುಣಮಟ್ಟದ ಹಾಲು ಸಿಗುತ್ತೆ : ಎಂ.ಪಿ.ರೇಣುಕಾಚಾರ್ಯ

ಸೊರಟೂರು : ಹೊನ್ನಾಳಿಯ ಪಶುಪಾಲನ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆ ಹಾಗೂ ಸೊರಟೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕರುಗಳ ಪ್ರದರ್ಶನ ಹಾಗೂ ಬರಡು ರಾಸು ಚಿಕಿತ್ಸಾ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.

ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಈ ಕಾರ್ಯಕ್ರಮದ ಉದ್ಘಾಟನೆ ಮಾಡಿದರು. ನಂತರ ಮಾತನಾಡಿದ ಅವರು, ನಮ್ಮ ಕ್ಷೇತ್ರದಲ್ಲಿ ಉತ್ತಮ ಗುಣಮಟ್ಟದ ಹಾಲು ಸಿಗುತ್ತದೆ. ಈ ಕಾರಣಕ್ಕೆ ಒಂದು ಲಕ್ಷ ಲೀಟರ್ ಹಾಲಿಗೆ ಬೇಡಿಕೆಯಿದ್ದು ೬೦ ಸಾವಿರ ಲೀಟರ್ ಹಾಲನ್ನ ಇಲ್ಲಿಂದ ಪೂರೈಕೆ ಮಾಡಲಾಗುತ್ತಿದೆ ಎಂದರು.