ಜನವರಿ ೨೬ಕ್ಕೆ ವಿ ದ ಪೀಪಲ್ ಆಫ್ ಇಂಡಿಯಾ ನಾಟಕ 

ಶಿವಮೊಗ್ಗ : ಇಲ್ಲಿನ ರಂಗಾಯಣ ವತಿಯಿಂದ ಸರ್ವರಿಗೂ ಸಂವಿಧಾನ ಯೋಜನೆಯಡಿ ವಿ ದ ಪೀಪಲ್ ಆಫ್ ಇಂಡಿಯಾ ಎಂಬ ನಾಟಕ ಪ್ರದರ್ಶನ ಆಯೋಜನೆ ಮಾಡಲಾಗಿದೆ.

ಈ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ರಂಗಾಯಣ ನಿರ್ದೇಶಕ ಸಂದೇಶ್ ಜವಳಿ ಭಾರತದ ಸಂವಿಧಾನವನ್ನ ಸಮಾಜದ ಎಲ್ಲಾ ವರ್ಗದವರಿಗೆ ವಿಶಿಷ್ಟವಾಗಿ ಅರ್ಥೈಸುವ ಉದ್ದೇಶದಿಂದ ಈ ನಾಟಕ ಪ್ರದರ್ಶನ ನಡೆಯಲಿದೆ. ಜನವರಿ ೨೬ ರಂದು ಸಂಜೆ ೬ ಗಂಟೆಗೆ ಸುವರ್ಣ ಸಂಸ್ಕೃತಿ ಭವನದಲ್ಲಿ ನಾಟಕದ ಪ್ರಥಮ ಪ್ರದರ್ಶನ ನಡೆಯಲಿದ್ದು, ಜನವರಿ ೨೭ ಹಾಗೂ ೨೮ ರಂದು ಕೂಡ ಸಂಜೆ ೬ ಗಂಟೆಗೆ ನಾಟಕ ಪ್ರದರ್ಶನ ನಡೆಯಲಿದೆ ಎಂದು ಮಾಹಿತಿ ನೀಡಿದರು.