ಶಿವಮೊಗ್ಗ ಸ್ಮಾರ್ಟ್‌ಸಿಟಿ ಕಾಮಗಾರಿ ಮುಗಿಯೋದು ಯಾವಾಗ?

ಶಿವಮೊಗ್ಗ : ಸ್ಮಾರ್ಟ್ ಸಿಟಿ ಯೋಜನೆಯ ಕೆಲಸವನ್ನು 2022ರ ಡಿಸೆಂಬರ್ ವೇಳೆಗೆ ಶೇಕಡಾ 95ರಷ್ಟು ಮುಗಿಸಲಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಹೇಳಿದ್ದಾರೆ.

ಸ್ಮಾರ್ಟ್ ಸಿಟಿ ಕಾಮಗಾರಿಯ ಕುರಿತು ಕನ್ನಡ ಮೀಡಿಯಂ ಜೊತೆ ಮಾತನಾಡದ ಅವರು, ಕೋವಿಡ್ ಕಾರಣದಿಂದಾಗಿ ಸ್ಮಾರ್ಟ್ ಸಿಟಿ ಕಾಮಗಾರಿಯ ಕೆಲಸ ತಡವಾಗಿದೆ. ಬೇರೆ ಬೇರೆ ಇಲಾಖೆಯ ಸಹಕಾರದೊಂದಿಗೆ ಕಾಮಗಾರಿ ನಡೆಸಲಾಗ್ತಾಯಿದೆ. ಇದುವರೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ೫೯೨ ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಯನ್ನ 2023ರ ಜೂನ್ ತಿಂಗಳೊಳಗೆ ಸಂಪೂರ್ಣವಾಗಿ ಮುಗಿಸಲಾಗುವುದು ಎಂದು ಮಾಹಿತಿ ನೀಡಿದರು.