ಭದ್ರಾ ಮೇಲ್ದಂಡೆ ಯೋಜನೆ ಪೂರ್ಣ ಯಾವಾಗ..?  

ಶಿವಮೊಗ್ಗ : ಭದ್ರಾ ಮೇಲ್ದಂಡೆ ಯೋಜನೆ ಆರಂಭವಾಗಿ ೧೪ ವರ್ಷವಾಗಿದೆ. ಆದ್ರೆ, ಅದ್ಯಾವಾಗ ಪೂರ್ಣಗೊಂಡು ರೈತರ ಜಮೀನಿಗೆ ನೀರು ಪೂರೈಕೆಯಾಗುತ್ತೋ ಗೊತ್ತಿಲ್ಲ. ಕಾಮಗಾರಿ ಪ್ರಗತಿಯಲ್ಲಿ ಅನ್ನೋ ಬೋರ್ಡ್‌ಗಳು ಇಂದಿಗೂ ನೇತಾಡುತ್ತಲೇ ಇವೆ. ಆ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವನ್ನು ಖಂಡಿಸಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಿರಿಯೂರು ಶಾಖೆಯ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮುತ್ತಿನಕೊಪ್ಪದಿಂದ ಭದ್ರಾ ಜಲಾಶಯದ ವರೆಗೆ ಜನವರಿ ೩ರಂದು ಪಾದಯಾತ್ರೆ ನಡೆಯಲಿದೆ. ಈ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ರೈತ ಮುಖಂಡ ಕೆ.ಟಿ. ಗಂಗಾಧರ್, ಭದ್ರಾ ಮೇಲ್ದಂಡೆ ಯೋಜನೆ ಆರಂಭವಾಗಿ ೧೪ ವರ್ಷಾಗಳಾದರೂ ಕಾಮಗಾರಿ ಸಂಪೂರ್ಣವಾಗಿ ಪೂರ್ಣಗೊಳ್ಳಲು ವಿಳಂಬವಾಗುತ್ತಿರುವುದರಿಂದ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ವಿಚಾರವಾಗಿ ಅಲಿಯೇ ಒಂದು ಸಮಾವೇಶ ನಡೆಸಿ ಕಾಮಗಾರಿಯನ್ನ ಶೀಘ್ರವಾಗಿ ಪೂರ್ಣಗೊಳಿಸುವಂತೆ ನೀರಾವರಿ ಸಚಿವ ಗೋವಿಂದ ಕಾರಜೋಳ ಹಾಗೂ ನೀರಾವರಿ ಇಲಾಖೆಯ ಎಂಡಿಗೆ ಮನವಿ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದ್ರು.