ಮಹಿಳೆ ಎಲ್ಲಾ ಕ್ಷೇತ್ರದಲ್ಲಿಯೂ ಸಾಧಿಸಿದ್ದಾಳೆ 

ಹೊನ್ನಾಳಿ : ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ವತಿಯಿಂದ ಹೊನ್ನಾಳಿಯ ಗುರುಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಗಾರ ಕಾರ್ಯಕ್ರಮ ನಡೆಯಿತು. ಶಾಸಕ ಎಂ.ಪಿ.ರೇಣುಕಾಚಾರ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಅವರು, ಸಾವಿತ್ರಿಬಾಯಿ ಪುಲೆ ಅವರು, ಮಹಿಳೆ ಅಬಲೆಯಲ್ಲಿ ಸಬಲೆಯೆಂದು ಇಡೀ ದೇಶಕ್ಕೆ ತೋರಿಸಿಕೊಟ್ಟಿದ್ದಾರೆ. ಶಿಕ್ಷಣ ಕ್ಷೇತ್ರ, ವಾಣಿಜ್ಯ ಕ್ಷೇತ್ರ, ಕೈಗಾರಿಕಾ ಕ್ಷೇತ್ರ ಹೀಗೆ ಎಲ್ಲಾ ಕ್ಷೇತ್ರದಲ್ಲಿಯೂ ಹೆಣ್ಣು ಸಾಧನೆ ಮಾಡಿದ್ದಾಳೆ ಎಂದರು.