ಮಹಿಳಾ ದಿನಾಚರಣೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು 

ಶಿವಮೊಗ್ಗ : ಇಲ್ಲಿನ ಜಿಲ್ಲಾ ಶಾಶ್ವತಿ ಮಹಿಳಾ ವೇದಿಕೆ, ಇಂಟರ್‌ನ್ಯಾಷನಲ್ ಸಂಸ್ಥೆ ಹಾಗೂ ಲಯನ್ಸ್ ಮಹಿಳಾ ಶಾಂಭವಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮಗಳನಗಳನ್ನು ಆಯೋಜನೆ ಮಾಡಲಾಗಿದೆ.

ಮಾರ್ಚ್ 9ರಂದು ಆದಿಚುಂಚನಗಿರಿ ಸಭಾಭವನದಲ್ಲಿ ಈ ಕಾರ್ಯಕ್ರಮ ನಡೆಯಲಿಸದೆ. ಮಹಿಳೆಯರಿಗಾಗಿ ಮಹಿಳಾ ಜಾಗೃತಿ ಸಮಾವೇಶ, ರಾಜ್ಯ ಮಹಿಳಾ ಗುಲಾಭಿ ರೆಡ್‌ಪಡೆ ಉದ್ಘಾಟನೆ, ಬಡ ಗರ್ಭಿಣಿ ಮಹಿಳೆಯರಿಗೆ ಉಚಿತ ಸೀಮಂತ, ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಜಿಲ್ಲೆಯ ಸಾಧಕ ಗಣ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಮಹಿಳಾ ಸಂಘಟನೆಗಳ ವತಿಯಿಂದ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು.