ಶಿವಮೊಗ್ಗ : ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಪೌರಕಾರ್ಮಿಕರಿಗೆ ಮತ್ತು ಬೀದಿ ಬದಿ ವ್ಯಾಪಾರ ನಡೆಸಿ ಜೀವನ ನಡೆಸುತ್ತಿರುವ ಶ್ರಮಿಕ ಮಹಿಳೆಯರಿಗೆ ಶಾಲು ಹೊದಿಸಿ ಸನ್ಮಾನಿಸಲಾಗಿದೆ.
ಖಾಸಗಿ ಬಸ್ ನಿಲ್ದಾಣದಲ್ಲಿ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ನೇತೃತ್ವದದಲ್ಲಿ ಈ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ಪಾಲಿಕೆ ಸದಸ್ಯ ಹೆಚ್.ಸಿ. ಯೋಗೀಶ್ ಹಾಗೂ ಮತ್ತಿತತರು ಪಾಲ್ಗೊಂಡಿದ್ದರು.