ಪಾಲಿಕೆ ವತಿಯಿಂದ ಮಹಿಳಾ ದಿನಾಚರಣೆ

ಶಿವಮೊಗ್ಗ : ಇಲ್ಲಿನ ಮಹಾನಗರ ಪಾಲಿಕೆಯಿಂದ ಕುವೆಂಪು ರಂಗಮಂದಿರಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಪತ್ನಿ ವಾಗೀಶ್ವರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರಾದ ಪ್ರೋ ವೀಣಾ.ಎಂಕೆ, ಸಚಿವ ಕೆ.ಎಸ್. ಈಶ್ವರಪ್ಪ ಪತ್ನಿ ಜಯಲಕ್ಷ್ಮಿ ಹಾಗೂ ಮತ್ತಿತರ ಗಣ್ಯರು ಆಗಮಿಸಿದ್ದರು.

ಈ ವೇಳೆ ಸಾಮಾಜಿಕ ಸೇವೆಯಲ್ಲಿ ಸಾಧನೆಗೈದ ಹೆಚ್.ಎಂ.ರುಕ್ಮಿಣಿ ನಾಯಕ್, ಆರೋಗ್ಯ ಮತ್ತು ಇತರೆ ಸೇವಾ ಕ್ಷೇತ್ರದಿಂದ ಆರೋಗ್ಯ ಮೇರಿ ಹಾಗೂ ಕ್ರೀಡಾ ಕ್ಷೇತ್ರದಿಂದ ಸಣ್ಣನಂಜಮ್ಮ ಅವರನ್ನು ಗೌರವಿಸಿ ಸನ್ಮಾನಿಸಲಾಗಿದೆ. ಮಹಿಳಾ ದಿನಾಚರಣೆ ಅಂಗವಾಗಿ ನಡೆದಿದ್ದ ಹಲವು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಗಿದೆ.