ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಕಾರ್ಯಗಾರ

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ, ಪಿಯುಸಿ ನಂತರ ಮುಂದೇನು ಮಾಡಬೇಕು ಎಂಬ ಪ್ರಶ್ನೆ ಹಲವು ವಿದ್ಯಾರ್ಥಿಗಳಲ್ಲಿರುತ್ತದೆ. ಹೀಗಾಗಿ ಆಜ್ ಕ ಇಂಕ್ವಿಲಾಬ್ ಹಾಗೂ ಇಂಪೇರಿಯಲ್ ಸೈನ್ಸ್ ಅಂಡ್ ಕಾಮರ್ಸ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಅಲ್ಪ ಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಗಾರ ನಡೆಯಿತು.

ಕುವೆಂಪು ರಂಗಮಂದಿರದಲ್ಲಿ ನಡೆದ ಕಾರ್ಯಗಾರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷೀಪ್ರಸಾದ್ ಚಾಲನೆ ನೀಡಿದರು. ಸಿಐಜಿಎಂಎ ಸಂಸ್ಥೆಯ ಸ್ಥಾಪಕ ಹಾಗೂ ಸಿಇಒ ಅಮ್ಮೀನ್ ಈ ಮುದ್ಸಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರು