ಬಿಎಸ್‌ವೈ ಹುಟ್ಟುಹಬ್ಬ ಪ್ರಯುಕ್ತ ವಿಶೇಷ ಪೂಜೆ
ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಹೆಸರಿನಲ್ಲಿ ರವೀಂದ್ರ ನಗರದ ಗಣಪತಿ ದೇವಸ್ಥಾನ ಹಾಗೂ ಕೋಟೆ ಆಜಂನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ರುದ್ರೇಗೌಡ, ಸೂಡಾ ಮಾಜಿ ಅಧ್ಯಕ್ಷ ಜ್ಯೋತಿಪ್ರಕಾಶ್, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಸಂತೋಷ್ ಬಳ್ಳೇಕೆರೆ ಹಾಗೂ ಮತ್ತಿತರ ಬಿಜೆಪಿ ಮುಖಂಡರು ಪೂಜೆಯಲ್ಲಿ ಭಾಗಿಯಾಗಿ, ಸಿಹಿ ಹಂಚಿ ಸಂಭ್ರಮಾಚರಿಸಿದರು.
ಬಿಎಸ್‌ವೈ ಜನ್ಮದಿನದ ಹಿನ್ನೆಲೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಶಿಕಾರಿಪುರ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯುಡಿಯೂರಪ್ಪ ಜನ್ಮದಿನದ ಪ್ರಯುಕ್ತ ಅವರ ಅಭಿಮಾನಿಗಳಂದ ಶಿಕಾರಿಪುರದ ಮಂಗಳ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು. ನಾರಾಯಣ ಹೃದಯಾಲಯ, ಆರೋಗ್ಯ ಇಲಾಖೆ ಹಾಗೂ ಬಿಎಸ್‌ವೈ ಅಭಿಮಾನಿ ಬಳಗದಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಇದಕ್ಕೂ ಮುನ್ನ ಅಭಿಮಾನಿಗಳು ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನ ಹಾಗೂ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಸಿದರು.