ಬೆಂಗಳೂರು : ಬೇಸಿಗೆಯ ಬಿಸಿಲ ಧಗೆಯ ನಡುವೆ ಮುಂದಿನ ಮೂರು ದಿನ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಶ್ಚಿಮ ಬಂಗಾಳ ಮತ್ತು ಅರಬ್ಬಿ ಸಮುದ್ರಲ್ಲಿನ ಮೇಲ್ಮೈ ಸುಳಿಗಾಳಿಯಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಈ ಹಿನ್ನೆಲೆ ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಸೂಚನೆ ನೀಡಲಾಗಿದೆ.
ಅದೇ ರೀತಿ ಬೆಂಗಳೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಸೂಚಿಸಲಾಗಿದೆ. ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೆಲವಡೆ ಅನಾಹುತಗಳು ಸಂಭವಿಸಿವೆ.