ಶಿವಮೊಗ್ಗ : ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು. ಶಾಲಾ ಆವರಣದಲ್ಲಿ ಮಾಧ್ಯಮದವರಿಗೆ ಹಾಗೂ ಸಮವಸ್ತ್ರಧಾರಿ ಪೊಲೀಸರ ಪ್ರವೇಶವನ್ನ ನಿಷೇಧಿಸಬೇಕೆಂದು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಹಿಜಾಬ್ ವಿವಾದ ಹೈಕೋರ್ಟ್‌ನಲ್ಲಿದ್ದು, ಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಆದರೆ ಈ ಆದೇಶವು ಕಾಲೇಜು ಅಭಿವೃದ್ಧಿ ಸಮಿತಿಗಳಿರುವ ಕಾಲೇಜುಗಳಿಗೆ ಮಾತ್ರ ಅನ್ವಯಿಸುತ್ತದೆ. ಹಾಗೆಯೇ ಉನ್ನತ ಶಿಕ್ಷಣ ಸಚಿವರ ಹೇಳಿಕೆಯಂತೆ ಈ ಆದೇಶ ಡಿಗ್ರಿ ಕಾಲೇಜುಗಳಿಗೆ ಅನ್ವಯವಾಗುವುದಿಲ್ಲ. ಆದ್ದರಿಂದ ಕೋರ್ಟ್ ಆದೇಶ ಬರುವವರೆಗೂ ನಮಗೂ ಹಿಜಾಬ್ ಧರಿಸಿ ತರಗತಿಗಳಲ್ಲಿ ಕೂರಲು ಅವಕಾಶ ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.