ಶಿವಮೊಗ್ಗ : ಪೌರ ಕಾರ್ಮಿಕರ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು ಮುಷ್ಕರಕ್ಕೆ ಯುವ ಕಾಂಗ್ರೆಸ್ ಬೆಂಬಲ ಸೂಚಿಸಿದೆ. ಈ ಸಂಬಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿರುವ ಯುವ ಕಾಂಗ್ರೆಸ್ ಕಾರ್ಯಕರ್ತರು ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿ ಇಲ್ಲವಾದಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ರಾಜ್ಯಾದ್ಯಂತ ಜುಲೈ ೧ರಿಂದ ಪೌರ ಕಾರ್ಮಿಕರು ಮುಷ್ಕರ ನಡೆಸುತ್ತಿದೆ. ಪರಿಣಾಮವಾಗಿ ನಾಲ್ಕು ದಿನಗಳಿಂದ ಕಸ ವಿಲೇವಾರಿ ಸರಿಯಾಗಿ ಆಗ್ತಾಯಿಲ್ಲ. ಮುಖ್ಯಮಂತ್ರಿಗಳು ಪೌರ ಕಾರ್ಮಿಕರ ಸಮಸ್ಯೆಯನ್ನು ಆಲಿಸದೆ ಪಕ್ಷದ ಸಭೆಯಲ್ಲಿ ನಿರತರಾಗಿದ್ದಾರೆ. ಜನವಿರೋಧಿ ಬಿಜೆಪಿ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತು ಅರಿವಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.