ಶಂಕರಘಟ್ಟ : ಕುವೆಂಪು ವಿಶ್ವವಿದ್ಯಾಲಯದ ಅವ್ಯವಸ್ಥೆಗಳನ್ನು ಖಂಡಿಸಿ ವಿವಿ ಆವರಣದಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ದೂರ ಶಿಕ್ಷಣ ವಿಭಾಗದಲ್ಲಿ ಪರೀಕ್ಷಾ ಫಲಿತಾಂಶದ ಗೊಂದಲ ಮತ್ತು ಭ್ರಷ್ಟಾಚಾರದ ಆರೋಪ ಕೇಳಿ ಬರುತ್ತಿದೆ. ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಸೂಕ್ತ ಸಮಯದಲ್ಲಿ ಪದವಿ ಸಿಗದೇ ಪರದಾಡುವಂತಾಗಿದೆ. ಈ ನಿಟ್ಟಿನಲ್ಲಿ ಕೂಡಲೇ ದೂರ ಶಿಕ್ಷಣ ವಿಭಾಗ ಪರೀಕ್ಷಾ ಫಲಿತಾಂಶದ ವಿಚಾರದಲ್ಲಿನ ಎಲ್ಲಾ ಅವ್ಯವಸ್ಥೆಗಳನ್ನು ಸರಿಪಡಿಸಬೇಕು.
ದೂರ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶದ ವಿಚಾರದಲ್ಲಿ ವಿಶ್ವವಿದ್ಯಾಲಯದ ಉನ್ನತ ಅಧಿಕಾರಿಗಳ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಹೀಗಾಗಿ ರಾಜ್ಯಪಾಲರು ಮಧ್ಯಸ್ಥಿಕೆ ವಹಿಸಿ ಸೂಕ್ತ ತನಿಖೆಗೆ ಆದೇಶಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ ಹಾಗೂ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ವಿವಿ ಕುಲಸಚಿವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.