ಶಿವಮೊಗ್ಗ : ಶಾಖೆಯ ಅಖಿಲ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ ಸಮಸ್ಯೆ, ಹಾಸ್ಟೆಲ್‌ಗಳಿಂದ ಶಾಲಾ-ಕಾಲೇಜಿಗೆ ಬಸ್ ಸಮಸ್ಯೆ, ಎಸ್‌ಎಸ್‌ಪಿ ವಿದ್ಯಾರ್ಥಿ ವೇತನದ ಕುರಿತಾದ ಸಮಸ್ಯೆಗಳನ್ನ ಬಗೆಹರಿಸದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ.
ಕೆಲವೆಡೆ ವಿದ್ಯಾರ್ಥಿಗಳಿಗೆ ಕಾಲೇಜುಗಳಿಗೆ ಹೋಗಲು ಸರಿಯಾದ ಬಸ್ ವ್ಯವಸ್ಥೆ ಇಲ್ಲ. ಅಲ್ಲದೆ ಹಾಸ್ಟೆಲ್‌ಗಳಿಂದ ಬರುವಂತಹ ವಿದ್ಯಾರ್ಥಿಗಳಿಗೆ ಕೂಡ ಸೂಕ್ತವಾದ ಬಸ್ ವ್ಯವಸ್ಥೆಯಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗ್ತಾಯಿದೆ. ಇದರ ಜೊತೆಗೆ ಎಸ್‌ಎಸ್‌ಪಿ ವಿದ್ಯಾರ್ಥಿ ವೇತನ ಬಿಡುಗಡೆ ಮಾಡುಬೇಕು ಹಾಗೂ ಈ ಎಲ್ಲಾ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.