ತೀರ್ಥಹಳ್ಳಿ ಎಬಿವಿಪಿಯಿಂದ ಪ್ರತಿಭಟನೆ 

ತೀರ್ಥಹಳ್ಳಿ : ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನ ಬಗೆಹರಿಸುವಂತೆ ತೀರ್ಥಹಳ್ಳಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನ ಆದಷ್ಟು ಶೀಘ್ರವಾಗಿ ಪೂರ್ಣ ಪ್ರಮಾಣದಲ್ಲಿ ಈಡೇರಿಸಬೇಕು. ಈ ಮೂಲಕ ಕಾಲೇಜಿನಲ್ಲಿ ತರಗತಿಗಳು ಸರಾಗವಾಗಿ ನಡೆಯುವಂತೆ ಮಾಡಬೇಕು.

ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಗ್ರಾಮಗಳಲ್ಲಿಯೂ ಬಸ್ ವ್ಯವಸ್ಥೆ ಕಲ್ಪಿಸಿಕೊಡಬೇಕು ಹಾಗೂ ವಿದ್ಯಾರ್ಥಿಗಳಿಗೆ ಬರಬೇಕಿರುವ ಶಿಷ್ಯವೇತನವನ್ನ ತಕ್ಷಣವೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ತೀರ್ಧಹಳ್ಳಿಯ ಪ್ರಥಮ ದರ್ಜೆ ಕಾಲೇಜಿನಿಂದ ತಹಶೀಲ್ದಾರ್ ಕಚೇರಿ ತನಕ ಪ್ರತಿಭಟನ ಮೆರವಣಿಗೆ ನಡೆಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.