ಶಿವಮೊಗ್ಗ ಪಾಲಿಕೆ ಕಂದಾಯ ವಿಭಾಗದ ಮೇಲೆ ಎಸಿಬಿ ದಾಳಿ 

ಶಿವಮೊಗ್ಗ: ಮಹಾನಗರ ಪಾಲಿಕೆ ಕಂದಾಯ ವಿಭಾಗದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿ ನಡೆಸಿ ಹಲವು ಕಡತಗಳ ಪರಿಶೀಲನೆ ನಡೆಸಿದ್ದಾರೆ. ಕಂದಾಯ ವಿಭಾಗದ ಮೇಲೆ ದಾಳಿ ನಡೆಸಿದ್ದರಿಂದ ವಿಭಾಗದ ಕೆಲಸಗಳು ಸ್ಥಗಿತವಾಗಿವೆ. ಈ ವಿಭಾಗದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಡಿವೈಎಸ್ಪಿ ಜೈಪ್ರಕಾಶ್ ಮತ್ತು ಲೋಕೇಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.