ಡಿವೈಡರ್ ಹಾರಿ ಕಾರಿಗೆ ಗುದ್ದಿದ ಲಾರಿ: ಇಬ್ಬರ ಸಾವು 

ಭದ್ರಾವತಿ : ಶಿವಮೊಗ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಚೇನಹಳ್ಳಿ ಡೈರಿ ಸಮೀಪ ಬೆಳ್ಳಂಬೆಳಗ್ಗೆಯೇ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲಿಯೆ ಮೃತ ಪಟ್ಟಿದ್ದಾರೆ. ಶಿವಮೊಗ್ಗದಿಂದ ಭದ್ರಾವತಿ ಕಡಗೆ ತೆರಳುತ್ತಿದ್ದ ಲಾರಿ ಹಾಗೂ ಭದ್ರಾವತಿಯಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ.

ಲಾರಿ ಚಾಲಕನ ಅಜಾಗರುಕತೆಯಿಂದಾಗಿ ಡಿವೈಡರ್ ದಾಟಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಹೀಗಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಭದ್ರಾವತಿ ಪೇಪರ್ ಟೌನ್ ಬಡಾವಣೆಯ ಇಬ್ಬರು ನಿವಾಸಿಗಳು ಮೃತಪಟ್ಟಿದ್ದಾರೆ. ಷಣ್ಮುಖ ಹಾಗೂ ರಾಮಚಂದ್ರ ಮೃತ ದುರ್ದೈವಿಗಳು ಎನ್ನಲಾಗಿದ್ದು, ಈ ಕುರಿತಾಗಿ ಭದ್ರಾವತಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.