ಶಿವಮೊಗ್ಗ : ರಾಷ್ಟ್ರೀಯ ಶಿಕ್ಷಣ ಸಮಿತಿಯು ಅಮೃತ ಮಹೋತ್ಸವದ ಅಂಗವಾಗಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕುವೆಂಪು ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನು ಮಾಜಿ ಶಾಸಕ ವೈ.ಎಸ್.ವಿ.ದತ್ತ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಎನ್‌ಇಎಸ್ ಶಿಕ್ಷಣ ಸಂಸ್ಥೆಯು ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಕೂಡ ಕೈಗೆಟಕುವಂತೆ ಶಿಕ್ಷಣವನ್ನು ನೀಡುತ್ತಿದೆ. ಈ ಸಂಸ್ಥೆಯ ಅಡಿಯಲ್ಲಿ ಬರುವ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಎಲ್ಲ ಕಡೆಯಲ್ಲಿಯೂ ರ್‍ಯಾಂಕ್ ಪಡೆದುಕೊಳ್ಳುತ್ತಿದ್ದಾರೆ. ಈ ಮೂಲಕ ಸಂಸ್ಥೆಗೆ ಮತ್ತಷ್ಟು ಗರಿ ಮೂಡಿಸುವ ಕೆಲಸವನ್ನು ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಪ್ರಮುಖರು, ಕಾಲೇಜುಗಳ ಪ್ರಾಂಶುಪಾಲರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.