ವಿಮಾನ ನಿಲ್ದಾಣಕ್ಕೆ ಡಾ. ಬಿ.ಆರ್.ಅಂಬೇಡ್ಕರ್ ಹೆಸರಿಡಲು ಒತ್ತಾಯ

ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಅಂಬೇಡ್ಕರ್ ಹೆಸರು ಇಡುವಂತೆ ಡಾ. ಬಿ.ಆರ್.ಅಂಬೇಡ್ಕರ್ ಆದಿ ಜಾಂಬವ ಕ್ಷೇಮಾಭಿವೃದ್ಧಿ ಸಂಘ ಆಗ್ರಹಿಸಿದೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಘಟನೆಯ ಪ್ರಮುಖರು, ವಿಮಾನ ನಿಲ್ದಾಣಕ್ಕೆ ಅಂಬೇಡ್ಕರ್ ಹೆಸರಿಡುವುದಲ್ಲದೆ, ಅವರ ಪುತ್ಥಳಿಯನ್ನು ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಬೇಕು. ಎಸ್‌ಸಿ, ಎಸ್‌ಟಿ ಬಗರ್ ಹುಕುಂ ಸಾಗುವಳಿ ಜಮೀನುಗಳನ್ನು ಅಕ್ರಮ ಸಕ್ರಮ ಯೋಜನೆಯಡಿ ಸಕ್ರಮಗೊಳಿಸಿ ಸಾಗುವಳಿ ಚೀಟಿ ಹಾಗೂ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಬೇಕು. ಶಿವಮೊಗ್ಗ ನಗರದಲ್ಲಿ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಕಚೇರಿಯನ್ನು ತೆರೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ರು.