ಡಿ.ಎಸ್.ಅರುಣ್ ನೇತೃತ್ವದಲ್ಲಿ ನಡೆದ ಸಭೆ

ಶಿವಮೊಗ್ಗ : ಜಿಲ್ಲಾ ಮಟ್ಟದ ಅಂತ್ಯೋದಯ ಕಾರ್ಯಕ್ರಮದ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಪರಿಷತ್ ಸದಸ್ಯ ಡಿ.ಎಸ್.ಅರುಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ ಹಾಗೂ ಮತ್ತಿತರ ಅಧಿಕಾರಿಗಳು ಭಾಗಿಯಾಗಿದ್ರು.

ಈ ವೇಳೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಚರ್ಚೆ ನಡೆಸಲಾಯಿತು ಅಂದ್ಹಾಗೆ ಸೆಪ್ಟಂಬರ್ ತಿಂಗಳ ಮೊದಲ ವಾರದಲ್ಲಿ  ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಒಂದು ದಿನದ ಕಾರ್ಯಗಾರವನ್ನೇ ಅಂತ್ಯೋದಯ ಹೆಸರಿನಲ್ಲಿ ನಡೆಸಲಾಗ್ತಾಯಿದೆ. ಇದರಲ್ಲಿ ಜಿಲ್ಲೆಯ ೨೬೨ ಗ್ರಾಮ ಪಂಚಾಯತಿಗಳ ೨೬೬೦ ಸದಸ್ಯರು ಹಾಗೂ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ೨೩೦ ಸದಸ್ಯರು ಭಾಗಿಯಾಗಲಿದ್ದಾರೆ.