ನಂದಿತಾ ಪ್ರಕರಣ ಇದೀಗ ಮುಗಿದ ಅಧ್ಯಾಯ : ಆರಗ ಜ್ಞಾನೇಂದ್ರ 

ಶಿವಮೊಗ್ಗ : ತೀರ್ಥಹಳ್ಳಿಯ ನಂದಿತಾ ಪ್ರಕರಣವು ಕಿಮ್ಮನೆ ರತ್ನಾಕರ್ ಅವರ ಅವಧಿಯಲ್ಲಿ ನಡೆದ ಘಟನೆಯಾಗಿತ್ತು, ಆಗ ಅವರೇಕೆ ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಲಿಲ್ಲ ಎಂದು ಗೃಹಮಂತ್ರಿ ಆರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ.

ಶಿವಮೊಗ್ಗ ಪ್ರೆಸ್ ಟ್ರಸ್ಟ್‌ನಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡದ ಅವರು, ನಂದಿತಾ ಪ್ರಕರಣದಲ್ಲಿ ಕಿಮ್ಮನೆ ರತ್ನಾಕರ್ ಅವರ ಯಾವ ವಿಷಯಗಳ ಕುರಿತಾಗಿ ನಾನು ಕಮೆಂಟ್ ಮಾಡುವುದಿಲ್ಲ. ಈ ಪ್ರಕರಣದಲ್ಲಿ ಅವರ ಅಧಿಕಾರದಲ್ಲಿಯೇ ೩೦೦ ಕ್ಕೂ ಹೆಚ್ಚು ಜನರನ್ನ ಬಂಧಿಸಿದ್ದಾರೆ. ಪ್ರಕರಣದ ಕುರಿತಾಗಿ ಎಲ್ಲಾ ಸಾಕ್ಷಿಗಳನ್ನು ನಾಶ ಮಾಡಿ ಈಗ ಅವರೇ, ಪ್ರಕರಣವನ್ನ ಸಿಬಿಐಗೆ ವಹಿಸಿ ಎಂದು ಹೇಳುತ್ತಿದ್ದಾರೆ. ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ನಂದಿತಾ ಪ್ರಕರಣವನ್ನ ಮತ್ತೆ ಕೆದಕುತ್ತಿದ್ದಾರೆ. ಆದ್ರೆ ಇದೀಗ ಈ ಪ್ರಕರಣವು ಮುಗಿದ ಅಧ್ಯಾಯವಾಗಿದೆ ಎಂದು ಹೇಳಿದರು.