ಶಿವಮೊಗ್ಗ : ಡಿಎಸ್‌ಎಸ್ ಸ್ಥಾಪಕ ಪ್ರೊ.ಬಿ.ಕೃಷ್ಣಪ್ಪನವರ ೮೫ನೇ ಜನ್ಮದಿನವನ್ನು ಶಿವಮೊಗ್ಗದಲ್ಲಿ ಅದ್ದೂರಿಯಾಗಿ ಆಚರಿಸಲಾಗಿದೆ. ಕುವೆಂಪು ರಂಗಮಂದಿರದಲ್ಲಿ ಡಿಎಸ್‌ಎಸ್ ಹಾಗೂ ಕರ್ನಾಟಕ ದಲಿತ ನೌಕರರ ಒಕ್ಕೂಟದ ವತಿಯಿಂದ ಈ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸಿದ್ದನಗೌಡ ಪಾಟೀಲ್ ನೆರವೇರಿಸಿದರು. ಡಿಎಸ್‌ಎಸ್ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಬಿ.ಎಲ್.ರಾಜು ಪ್ರೊ.ಬಿ.ಕೃಷ್ಣಪ್ಪನವರ ಕುರಿತಾಗಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಡಿಎಸ್‌ಎಸ್ ರಾಜ್ಯ ಸಂಚಾಲಕ ಗುರುಮೂರ್ತಿ ವಹಿಸಿಕೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕೆ.ಟಿ.ಗಂಗಾಧರ್, ಪಠ್ಯದಲ್ಲಿ ಅಂಬೇಡ್ಕರ್ ಕುರಿತಾಗಿ ಸಂವಿಧಾಮ ಶಿಲ್ಪಿ ಎಂಬ ಪದವನ್ನು ತೆಗೆದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಈಗಿನ ಸಂದರ್ಭದಲ್ಲಿ ವಿದ್ಯಾಭ್ಯಾಸ ದುಬಾರಿಯಾಗಿದೆ. ಹೀಗಿದ್ದಾಗ ಹಳ್ಳಿ ಮಕ್ಕಳು ಹೇಗೆ ವಿದ್ಯಾಭ್ಯಾಸ ನಡೆಸ್ತಾರೆ ಎಂದು ಪ್ರಶ್ನಿಸಿದರು. ಈ ವೇಳೆ ವೇದಿಕೆ ಮೇಲೆ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ರೈತ ಹೋರಾಟಗಾರ ಕೆ.ಟಿ.ಗಂಗಧಾರ್, ವಕೀಲ ಕೆ.ಪಿ.ಶ್ರೀಪಾಲ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.