ಐಪಿಎಸ್ ಅಧಿಕಾರಿ ಡಿ. ರೂಪಾಗೆ ಜಾಮೀನು ಮಂಜೂರು
ಮಾನನಷ್ಟ ಮೊಕದ್ದಮೆ ಹೂಡಿದ ಪ್ರಕರಣ
ಐಎಎಸ್ ರೋಹಿಣಿ ಸಿಂಧೂರಿ ಹೂಡಿದ್ದ ಪ್ರಕರಣ
ಐಪಿಎಸ್ ಅಧಿಕಾರಿ ಡಿ. ರೂಪಾ ಅವರಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಡಿ.ರೂಪ ಅವರು ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಇದರಿಂದ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟಾಗಿದೆ. ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕವಾಗಿ ನೋವುಂಟು ಮಾಡಿದೆ ಎಂದು ರೋಹಿಣಿ ಸಿಂಧೂರಿ ಮೊಕದ್ದಮೆ ಹೂಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಡಿ.ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ಆದೇಶ ನೀಡಿತ್ತು.