ಬೀದಿಗಿಳಿದು ಬ್ಯಾಂಕ್ ನೌಕರರ ಪ್ರತಿಭಟನೆ

ಶಿವಮೊಗ್ಗ : ರಾಷ್ಟ್ರೀಕೃತ ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆಯು ಎರಡು ದಿನಗಳ ಕಾಲ ದೇಶದಾದ್ಯಂತ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಆ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೆನರಾ ಬ್ಯಾಂಕ್ ಮುಖ್ಯ ಶಾಖೆಯ ಅಧಿಕಾರಿಗಳ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಲಾಯ್ತು.

ವಾಸವಿ ವೃತ್ತದ ಬಳಿಯಿರುವ ಕೆನರಾ ಬ್ಯಾಂಕಿನ ಮುಖ್ಯ ಶಾಖೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಮುಂಭಾಗವಿರುವ ಕೆನರಾ ಬ್ಯಾಂಕಿನ ಪ್ರಾದೇಶಿಕ ಕಚೇರಿಗಳ ಮುಂಭಾಗ ಪ್ರತಿಭಟನೆ ನಡೆಸಲಾಯ್ತು. ಕೇಂದ್ರ ಸರ್ಕಾರದ ವಿರುದ್ಧ ಸರ್ಕಾರದ ವಿರುದ್ಧ ಪ್ರತಿಭಟನಕಾರರು ಘೋಷಣೆ ಕೂಗಿದರು. ರಾಷ್ಟ್ರೀಕೃತ ಬ್ಯಾಂಕ್‌ಗಳ ಲಾಭವನ್ನ ಸಾರ್ವಜನಿಕಗೆ ನೀಡಬೇಕೆಂದು ಒತ್ತಾಯಿಸಿದರು.

ಜೊತೆಗೆ ಬ್ಯಾಂಕ್‌ಗಳ ಖಾಸಗೀಕರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಬ್ಯಾಂಕಿಂಗ್ ತಿದ್ದುಪಡಿ ಕಾಯ್ದೆಗೆ ನಮ್ಮ ಸಂಪೂರ್ಣ ವಿರೋಧವಿದೆಯೆಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಕೆನರಾ ಬ್ಯಾಂಕಿನ ಅಸೋಸಿಯೇಶನ್‌ನ ಜನರಲ್ ಸೆಕರೇಟರಿ ನೆಲ್ಸನ್, ರೀಜಿನಲ್ ಸೆಕರೀಟರಿ ಹೊನ್ನಪ್ಪ, ಡಿಸ್ಟಿಕ್ ಸೆಕರೇಟರಿ ಶ್ರೀಕಾಂತ್.ಡಿ.ಕೆ ಹಾಗೂ ಮತ್ತಿತರರು ಭಾಗವಹಿಸಿದ್ದರು