ಬೆಲೆ ಏರಿಕೆ ವಿರುದ್ಧ ಹೆಚ್ಡಿಕೆ ಕಿಡಿ

ಬೆಂಗಳೂರು: ಪೆಟ್ರೋಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ಪರಿಣಾಮ ಬೀರಿದೆ. ರೈತರು ಸೇರಿದಂತೆ ಎಲ್ಲ ವರ್ಗದವರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎರಡು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿರುವವರ ಬದುಕನ್ನು ಸರಿಪಡಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ರು. ಅಧಿವೇಶನದಲ್ಲಿ ನಿಮಯ ೬೯ರ ಅಡಿ ಮಾತನಾಡಿದ ಅವರು, ಬೆಲೆ ಏರಿಕೆ ನಿರಂತರ ಪ್ರಕ್ರಿಯೆಗಳಾಗಿದ್ದು, ಸ್ವಾತಂತ್ರ್ಯ ಬಂದಾಗಿನಿAದಲೂ ಸರ್ಕಾರದ ಆರ್ಥಿಕ ಸುಧಾರಣೆಗಳನ್ನು ಮಾಡಿಕೊಳ್ಳಲು, ಯೋಜನೆಗಳ ಜಾರಿಗಾಗಿ ಬೆಲೆ ಏರಿಕೆ ಸಹಜವಾಗಿದೆ. ಆಡಳಿತ ಪಕ್ಷದ ಸರ್ಕಾರಗಳು ಬೆಲೆ ಏರಿಕೆ ಮಾಡುವ ಸಂದರ್ಭದಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ, ಹೋರಾಟ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆದುಕೊಂಡು ಬಂದ ಪದ್ಧತಿ ಎಂದರು.