ಶಿವಮೊಗ್ಗ : ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಶಾಸಕ ಗೋಪಾಲ ಕೃಷ್ಣ ಬೇಳೂರು ಹರಿಹಾಯ್ದಿದ್ದಾರೆ. ಈಶ್ವರಪ್ಪ ಬಾಯಿ ಚಪಲಕ್ಕೆ ಎನ್ ಬೇಕಾದರೂ ಹೇಳಿಕೆ ಕೊಡ್ತಾಯಿದ್ದಾರೆ. ನಿಮ್ಮದು 40 ಪರ್ಸೆಂಟ್ ಸರ್ಕಾರ. ಈಶ್ವರಪ್ಪ ಕೂಡಲೇ ರಾಜೀನಾಮೆ ಕೊಡಬೇಕು. ಈ ಪ್ರಕರಣನ್ನು ಹೈ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಕೆ ಮಾಡಬೇಕು ಎಂದು ಗೋಪಾಲಕೃಷ್ಣ ಬೇಳೂರು ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಈಶ್ವರಪ್ಪ ರಾಜೀನಾಮೆ ಕೊಡಬೇಕು. ಹಾಗೇಯೇ ಧರ್ಮಗಳನ್ನು ಒಡೆಯುವಂತಹ ಹೇಳಿಕೆ ನೀಡಿರುವ ಗೃಹ ಸಚಿವ ಆರಗಾ ಜ್ಞಾನೇಂದ್ರ ಕೂಡ ರಾಜೀನಾಮೆ ಕೊಡಬೇಕು. ಸಂತೋಷ್ ಕುಟಂಬಕ್ಕೆ ನ್ಯಾಯ ಸಿಗಬೇಕು, ಆತನ ಕುಟುಂಬದ ಒಬ್ಬರಿಗೆ ಉದ್ಯೋಗ ಕೊಡಬೇಕು ಎಂದು ಗೋಪಾಲಕೃಷ್ಣ ಆಗ್ರಹಿಸಿದ್ದಾರೆ.